ಮಾಳ ಗುರುಕುಲ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ

ಕಾರ್ಕಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 2024-25ರ ಶೈಕ್ಷಣಿಕ ವರ್ಷದ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಇತ್ತಿಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪೇಟ, ಶಾಲು, ಗ್ರೂಪ್ ಫೋಟೋ, ಹೂವು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿಯರಾದ ಶೋಭ ಸ್ವಾಗತಿಸಿ, ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಸುನಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ರವಿ ಜೋಶಿ, ಸದಸ್ಯ ರಘುಪತಿ ಕಾಮತ್, ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.













































































error: Content is protected !!
Scroll to Top