ಕಾರ್ಕಳ : ಗೆಳೆಯರ ಬಳಗ ನೆಲ್ಲಿಗುಡ್ಡೆ ಮುಡಾರು ಇದರ 21ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಮಾ. 30ರಂದು ನೆಲ್ಲಿಗುಡ್ಡೆ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಸಂಜೆ 6 ಗಂಟೆಯಿಂದ 7ರವರೆಗೆ ನೆಲ್ಲಿಗುಡ್ಡೆ ಹೆಪೆಜಾರು ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯವರಿಂದ ಕುಣಿತ ಭಜನೆ, 7ರಿಂದ 8 ಗಂಟೆಯವರೆಗೆ ಬಾಲವೇದಿಕೆ, ಮಹಿಳಾ ವಿಭಾಗದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಳಗದ ಅಧ್ಯಕ್ಷ ಸುರೇಶ್ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದು, ಮುಡಾರು ಗ್ರಾ. ಪಂ. ಅಧ್ಯಕ್ಷೆ ಶೃತಿ ಡಿ. ಅಧಿಕಾರಿ, ಮುದ್ರಾಡಿ ಗುರುರಕ್ಷಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ ಪೂಜಾರಿ ಸೇರಿದಂತೆ ಸಾಮಾಜಿಕ ಮುಖಂಡರು, ಉದ್ಯಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸೃಷ್ಠಿ ಕಲಾವಿದರು ಬಜಗೋಳಿ ಅಭಿನಯದ ʼದೈವದೃಷ್ಠಿʼ ಮತ್ತು ಚಾ ಪರ್ಕ ಕಲಾವಿದೆರ್ ಕುಡ್ಲ ಅಭಿನಯದ ʼಏರ್ಲಾ ಗ್ಯಾರಂಟಿ ಅತ್ತ್ʼ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







































