ಬೆಲೆ ಏರಿಕೆ ಖಂಡಿಸಿ ಸರಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕರೆ

ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ರಾಜ್ಯದ್ಯಂತ ಹೋರಾಟ ನಡೆಸುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏ.​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏ.​ 5ರಂದು ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ ಎಂದರು.

ಏ. 7ರಂದು ಮೈಸೂರಿನಿಂದ ಜನಜಾಗೃತಿ ಹೋರಾಟ ಪ್ರಾರಂಭವಾಗುತ್ತದೆ. ಜನಾಕ್ರೋಶ ಹೋರಾಟಕ್ಕೆ ಮಧ್ಯಾಹ್ನ 3ಗಂಟೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡುತ್ತಾರೆ. ಏ.7ರಂದು ಮೈಸೂರು, ಚಾಮರಾಜನಗರದಲ್ಲಿ ಜನಜಾಗೃತಿ ಹೋರಾಟ ನಡೆಯಲಿದ್ದು, ಏ. 8ರಂದು ಮಂಡ್ಯ, ಹಾಸನದಲ್ಲಿ ನಡೆಯಲಿದೆ. ಏ. 9ರಂದು ಕೊಡಗು, ಮಂಗಳೂರಿನಲ್ಲಿ, ಏ. 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ, ಏ. 13ರಂದು ಶಿವಮೊಗ್ಗ, ಕಾರವಾರದಲ್ಲಿ ಜನಾಕ್ರೋಶ ಹೋರಾಟ ನಡೆಯಲಿದೆ. ಪ್ರತಿ ಜಿಲ್ಲೆಯಲ್ಲಿ 2-3 ಕಿ.ಮೀ. ಪಾದಯಾತ್ರೆ, ಸಭೆಗಳನ್ನು ಮಾಡುತ್ತೇವೆ. ಈ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ಮಾತ್ರ ಕೈಗೆತ್ತಿಕೊಂಡಿದೆ ಎಂದರು.





























































































































error: Content is protected !!
Scroll to Top