ಕರ್ತವ್ಯ ಲೋಪ ಆರೋಪ – ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಮಾನತು

ಉಡುಪಿ : ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ವಹಿಸಲಾಗಿದೆ.

ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು. ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





























































































































error: Content is protected !!
Scroll to Top