ಉಡುಪಿ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 35 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಕಳ ತಾಲೂಕು ಬೈಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಬೋಳ ಪಿಲಿಯೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಹೆಬ್ರಿ ತಾಲೂಕಿನ ಶ್ರೀ ಪಾಂಡುಕಲ್ಲು (ಶಿವಪುರ) ಕೋಟೆನಾಥ ದೇವಸ್ಥಾನ ಹಾಗೂ ಚಾರಾದ ಶ್ರೀ ಮಹಿಷಮರ್ದಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಆಸಕ್ತರು ಕನಿಷ್ಠ 25 ವರ್ಷ ಮೇಲ್ಪಟ್ಟಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎ. 17 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾ ಸಂಕೀರ್ಣ ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ
































































