ಸುಳ್ಯ: ಬ್ರೇಕ್ ನ ಅಡಿಗೆ ಸಿಲುಕಿದ ನೀರಿನ ಬಾಟಲಿಯೊಂದು ಸಿಲುಕಿ ಕಾರೊಂದು ನಿಯಂತ್ರಣ ತಪ್ಪಿ ಮನೆ ಮೇಲೆ ಪಲ್ಟಿಯಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಚಿರೆಕಲ್‍ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‍ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಕ್ರೇನ್ ಮೂಲಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ತೆಗೆಯಲಾಯಿತು.
































































