ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದಿಂದ ಬೆಲೆ ಏರಿಕೆ ಕ್ರಮ ಮುಂದುವರಿಯುತ್ತಿದ್ದು, ಇದೀಗ ಡಿಸೇಲ್ ದರ 2 ರೂ. ಏರಿಕೆ ಮಾಡುವ ಮೂಲಕ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಏ. 1ರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ ಮಾಡಿದೆ.
ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ 90.93 ರೂ.ಗೆ ಆಗಲಿದೆ.
ರಾಜ್ಯ ಸರಕಾರ ಕಳೆದ ವರ್ಷವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿತ್ತು. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿತ್ತು.










































