ಜಿನಾ ಕಣ್ಮರೆ ಲವ್‌ ಜಿಹಾದ್‌ ಷಡ್ಯಂತ್ರ

ಉಡುಪಿ : ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿ, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ. ಅಕ್ರಮ್‌ಗೆ ಪಿಎಫ್ಐ ನಂಟಿದ್ದು ಈ ಬಗ್ಗೆ ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ. ಆರ್. ಆಗ್ರಹಿಸಿದ್ದಾರೆ.

ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವತಿಯು 9 ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯಿಸಿಕೊಂಡು ಲವ್ ಜಿಹಾದ್ ಬಲೆಗೆ ಬೀಳಿಸಿಕೊಂಡಿದ್ದ. ಅಶ್ಲೀಲ ಪೋಟೊಗಳನ್ನು ಚಿತ್ರಿಸಿ ಬೆದರಿಸಿದ್ದ. ಆಗ ಫೋಕ್ಸೊ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ನಿರಂತರವಾಗಿ ಆಕೆಯನ್ನು ಹಿಂಬಾಲಿಸಿ, ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಆರೋಪಿಸಿದರು.

ಅಕ್ರಮ್ ಡ್ರಗ್ಸ್ ಜಾಲದಲ್ಲಿ ಸಕ್ರಿಯವಾಗಿರುವ ಗರುಡ ಗ್ಯಾಂಗ್‌ ಸದಸ್ಯ ಎಂದು ಸಂತ್ರಸ್ತೆಯ ಪೋಷಕರು ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಈ‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪೋಷಕರ ಮಡಿಲಿಗೆ ಮಗಳನ್ನು ಸೇರಿಸಿ ನ್ಯಾಯ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಮೂರ್ನ್ಕಾಲು ವರ್ಷಗಳಿಂದ ಯುವತಿಯನ್ನು ನಿರಂತರವಾಗಿ ಹಿಂಬಾಲಿಸಿ ಮದುವೆಯಾಗಲು ಬೆದರಿಸಿ ಅಪಹರಿಸಿದ ಅಕ್ರಮ್‌ನನ್ನು ಬಂಧಿಸಿ, ಆತನ ಹಿಂದಿರುವ ಜಾಲದ ಬಗ್ಗೆ ತನಿಖೆ ನಡೆಸಬೇಕು. ರಾಜ್ಯ ಗೃಹ ಸಚಿವರು ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿಯನ್ನು ನೀಡಿ ಎನ್‌ಐಎಗೆ ಪ್ರಕರಣವನ್ನು ನೀಡಬೇಕೆಂದು ಸುನಿಲ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ, ಜಿಲ್ಲಾ ಸಂಯೋಜಕ್ ಮನೋಜ್ ಮಲ್ಪೆ ಉಪಸ್ಥಿತರಿದ್ದರು.











































































error: Content is protected !!
Scroll to Top