ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಹಣ ವರ್ಗಾವಣೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು





































