ಉಡುಪಿ : ಟೈಮಿಂಗ್ ವಿಚಾರದಲ್ಲಿ ಹೊಡೆದಾಡಿಕೊಂಡ ಬಸ್ ಡ್ರೈವರ್ ಮತ್ತು ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಬಂಧಿತರನ್ನು ಮಂಜುನಾಥ ಬಸ್ಸಿನ ಚಾಲಕ ಉಚ್ಚಿಲದ ಮೊಹಮ್ಮದ್ ಆಲ್ಪಾಜ್ (25), ಹಾಗೂ ಆನಂದ ಬಸ್ಸಿನ ಕಂಡಕ್ಟರ್ ಚಿತ್ರದುರ್ಗದ ವಿಜಯಕುಮಾರ್ (25) ಎಂದು ಗುರುತಿಸಲಾಗಿದೆ.
ಎ.2ರಂದು ಸಂಜೆ 4:30ಕ್ಕೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಇರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುವ ಗಲಾಟೆ ನಡೆದಿದ್ದು, ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಸ್ಗಳನ್ನು ವಶಕ್ಕೆ ಪಡೆಯಲಾಗಿದೆ.









































