ಡೀಸೆಲ್​ ದರ ಏರಿಕೆ ವಿರೋಧಿಸಿ ಏ.14ರಂದು ಲಾರಿ ಮಾಲಕರ ಮುಷ್ಕರ

ಬೆಂಗಳೂರು : ರಾಜ್ಯ ಸರಕಾರದ ಡಿಸೇಲ್‌ ಬೆಲೆ ಏರಿಕೆಯ ಕ್ರಮವನ್ನು ವಿರೋಧಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದ್ದು ಮುಷ್ಕರಕ್ಕೆ ಕರೆ ನೀಡಿದೆ.

ರಾಜ್ಯ ಲಾರಿ ಮಾಲಕರ ಸಂಘದ ಅಧ್ಯಕ್ಷ ಜಿ. ಆರ್. ಷಣ್ಮುಗಪ್ಪ ಮಾತನಾಡಿ, ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿ ಡೀಸೆಲ್ ದರ ಹೆಚ್ಚಳ ಮಾಡಿದೆ. ಕಳೆದ ವರ್ಷ ಜೂನ್- 15ಕ್ಕೆ ಮೂರು ರೂಪಾಯಿ, ಈ ವರ್ಷ ಏ. 1 ರಂದು ಎರಡು ರೂಪಾಯಿ ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರು ವಿಷ ಕುಡಿಯುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ 6 ಲಕ್ಷ ಲಾರಿಗಳಿವೆ. ಎಲ್ಲ ಲಾರಿಗಳನ್ನು ಟೋಲ್ ಮತ್ತು ಹೈವೇಗಳಲ್ಲಿ ಬಿಟ್ಟು ಮುಷ್ಕರ ಮಾಡುತ್ತೇವೆ. ನಮ್ಮ ಮುಷ್ಕರದಲ್ಲಿ ಪೆಟ್ರೋಲ್, ಡೀಸೆಲ್ ಬಂಕ್​ಗಳು ಬಂದ್‌​ ಆಗಲಿದೆ. ಡೀಸೆಲ್ ಬೆಲೆ ಇಳಿಕೆ ಮಾಡಲು ಈಗಾಗಲೇ ಗಡುವು ನೀಡಿದ್ದೆವು. ಆದರೆ, ಸರಕಾರ ಡಿಸೇಲ್ ದರ ಕಡಿಮೆ ಮಾಡಲು ಮುಂದಾಗಿಲ್ಲ. ಹೀಗಾಗಿ ಏ.​ 14 ರಂದು ರಾಜ್ಯಾದ್ಯಂತ ಮುಷ್ಕರ ಮಾಡುತ್ತೇವೆ ಎಂದು ಹೇಳಿದರು.























































































































error: Content is protected !!
Scroll to Top