ಮಾಳ : ಲಾರಿ ಪಲ್ಟಿ – 11 ಮಂದಿಗೆ ಗಾಯ

ಕಾರ್ಕಳ : ಲಾರಿ ಪಲ್ಟಿಯಾಗಿ ಚಾಲಕ ಸೇರಿದಂತೆ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ‌ಎ. 7ರಂದು ಮುಂಜಾನೆ ಮಾಳದಲ್ಲಿ ಸಂಭವಿಸಿದೆ. ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್‌ ಐಟಂಗಳನ್ನು ಸಾಗಿಸುತ್ತಿದ್ದ ಲಾರಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಮಾಳ ಎಸ್‌.ಕೆ. ಬಾರ್ಡರ್‌ ಸಮೀಪ ಪಲ್ಟಿಯಾಗಿದೆ. ಪರಿಣಾಮವಾಗಿ ಲಾರಿಯಲ್ಲಿದ್ದ 11 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ವಾಹನವೊಂದರಲ್ಲಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





























































































































error: Content is protected !!
Scroll to Top