ಎ. 9 : ಮಿಯ್ಯಾರು ಸ. ಹಿ. ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕಾರ್ಕಳ : ಮಿಯ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ, ಕ್ಯಾನ್‌ ಫಿನ್‌ ಹೋಮ್ಸ್‌ ಲಿ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣಗೊಂಡಿರುವ ಕೊಠಡಿಗಳ ಉದ್ಘಾಟನೆ, ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭ ಎ. 9ರಂದು ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಎಸ್‌ಡಿಎಂಸಿ ಅಧ್ಯಕ್ಷ ಎಂ.ಎಸ್.‌ ಅಶೋಕ್‌ ದ್ವಜಾರೋಹಣ ನೆರವೇರಿಸಲಿದ್ದಾರೆ. 10 ಗಂಟೆಗೆ ನೂತನ ಕೊಠಡಿಗಳ ಉದ್ಘಾಟನೆ, ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ, ಶೈಕ್ಷಣಿಕ ವಿಚಾರ ಗೋಷ್ಠಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಮಿಯ್ಯಾರು ಗ್ರಾ. ಪಂ. ಉಪಾಧ್ಯಕ್ಷೆ ಶ್ರೀದೇವಿ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಪಂಚಾಯತ್‌ ಸದಸ್ಯ ಮೇಬಲ್‌ ಜೋಯ್ಸ್‌ ಡಿʼಸಿಲ್ವಾ ವಿಚಾರಗೋಷ್ಠಿ ಉದ್ಘಾಟನೆ, ಲೆಕ್ಕ ಪರಿಶೋಧಕ ಕೆ. ಕಮಲಾಕ್ಷ ಕಾಮತ್‌ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ಹಿರಿಯ ವಿದ್ಯಾರ್ಥಿ ಶ್ಯಾಮ್‌ ಎನ್.‌ ಶೆಟ್ಟಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ ನೆರವೇರಿಸಲಿರುವರು. ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್‌ ಭಟ್‌ ಬಹುಮಾನ ವಿತರಣೆ ಮಾಡಲಿದ್ದಾರೆ.

ಸಭಾ ಕಾರ್ಯಕ್ರಮ
ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ನಿವೃತ್ತಿ ಹೊಂದುತ್ತಿರುವ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಮತ್ತು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಗುಲಾಬಿ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಂಚಾಯತ್‌ ಅಧ್ಯಕ್ಷೆ ಸನ್ಮತಿ ನಾಯಕ್‌ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರುಗಳು ಉಪಸ್ಥಿತರಿರಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ
ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಪೂರ್ವ ಪ್ರಾಥಮಿಕ, ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು, ಹಿಮಾನಿ ಮತ್ತು ಏಳು ಜನ ಕುಳ್ಳರು ಕಿರುನಾಟಕ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಭಕ್ರ ಧ್ರುವ ಎಂಬ ಪೌರಾಣಿಕ ಕಿರುನಾಟಕ, ಶಾಲಾ ಹಿರಿಯ ವಿದ್ಯಾರ್ಥಿಗಳಿಂದ ವಿನೋದಾವಳಿಗಳು ನಂತರ ಸಿಂಧೂರ ಕಲಾವಿದರು ಅಭಿನಯಿಸುವ ತುಳು ಹಾಸ್ಯಮಯ ನಾಟಕ ಡೊಂಬರಾಟ ಪ್ರದರ್ಶನಗೊಳ್ಳಲಿದೆ.















































































error: Content is protected !!
Scroll to Top