ಶಿರ್ಲಾಲು : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ಟಾಟಾ ಏಸ್‌ ವಾಹನ ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ಏ. 7ರಂದು ರಾತ್ರಿ ಶಿರ್ಲಾಲಿನಲ್ಲಿ ಸಂಭವಿಸಿದೆ. ಜಯಪ್ರಕಾಶ್‌ (20) ಎಂಬವರು ಶಿರ್ಲಾಲು ಚೌಕಿ ಬಳಿ ಹೆಗ್ಡೆಬೆಟ್ಟು ಕ್ರಾಸ್‌ನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅಂದರೆ ಕೆರ್ವಾಶೆಯಿಂದ ಅಂಡಾರು ಕಡೆಗೆ ಸಾಗುತ್ತಿದ್ದ ಟಾಟಾ ಏಸ್‌ ವಾಹನ ಡಿಕ್ಕಿಯಾಗಿದೆ. ಪರಿಣಾಮವಾಗಿ ಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ವೇಳೆ ಟಾಟಾ ಏಸ್‌ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ್ದು ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















































































error: Content is protected !!
Scroll to Top