ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಇಂದು (ಎ. 10) ಹಾಗೂ ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದ.ಕ. ದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ ಮಾತ್ರವಲ್ಲದೇ ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.





























































































































error: Content is protected !!
Scroll to Top