ನವದೆಹಲಿ : ಅಮೆರಿಕಾದಿಂದ ಗಡೀಪಾರು ಮಾಡಲಾಗುತ್ತಿರುವ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಪ್ರಮುಖ ಆರೋಪಿ ತಹವ್ವೂರ್ ಹುಸೇನ್ ರಾಣಾ ಭಾರತ ತಲುಪಿದ ಕೂಡಲೇ ಆತನನ್ನು ತಿಹಾರ್ ಜೈಲಿನಲ್ಲಿಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿರುವ ತಹವ್ವೂರ್ ರಾಣಾನನ್ನು ಇಂದು ಬೆಳಿಗ್ಗೆ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಆತನನ್ನು ಅಮೆರಿಕಾದಿಂದ ಭಾರತಕ್ಕೆ ಕರೆತರುವ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಬಂದಿಳಿಯಲಿದೆ. ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಅಲ್ಲಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ.






























































