ರಾಮಸಾಗರಗಾಮಿನೀ- ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ

ಕಾರ್ಕಳ :  ಕನ್ನಡ ಸಂಘ ಕಾಂತಾವರ, ಅಲ್ಲಮ ಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ನಡೆಯುವ ರಾಮಸಾಗರಗಾಮಿನೀ- ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಎಂಬ ತಿಂಗಳ ಸರಣಿ ಕಾರ್ಯಕ್ರಮ ಎ. 12ರಂದು ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ವಿದ್ವಾಂಸ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅವರು ‘ಸಾಕೇತದ ಸಂಭ್ರಮ’ ಎಂಬ ವಿಷಯದ ಕುರಿತು ಉಪನ್ಯಾಸ ನೆರವೇರಿಸಿದರು.
ಡಾ. ನಾ. ಮೊಗಸಾಲೆ, ನಿತ್ಯಾನಂದ ಪೈ ಮತ್ತು ಪ್ರೋ. ಮಿತ್ರಪ್ರಭಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಜಗದೀಶ ಗೋಖಲೆಯವರು ವಂದಿಸಿದರು.





































error: Content is protected !!
Scroll to Top