ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಅವರೇ ಕೈ ಹಿಡಿದು ಬರೆಸಿದ ಜಾತಿ ಗಣತಿ – ಸುನಿಲ್‌ ಕುಮಾರ್‌ ಲೇವಡಿ

ಬೆಂಗಳೂರು : ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ. ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್‌ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಜಾತಿ ಗಣತಿ ಹೆಲ್ಮೆಟ್ ಧರಿಸಿದ್ದಾರೆ ಎಂದು ಶಾಸಕ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಮರು ಅತಿದೊಡ್ಡ ಜನ ಸಮುದಾಯ, ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ. ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ. ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು. ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ‌ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ “ಮನೆಗೆ ಮಗನ್ನಲ್ಲʼʼ ಎಂಬಂತಾಗುತ್ತದೆಯಷ್ಟೇ ಎಂದು ಹೇಳಿದ್ದಾರೆ.



































error: Content is protected !!
Scroll to Top