67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಮಹೇಶ್‌ ಜೋಶಿ

ಬಳ್ಳಾರಿ : 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಹವಾಗುಣಕ್ಕೆ ತಕ್ಕಂತೆ ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈಗ 67 ವರ್ಷಗಳ ಬಳಿಕ ನಡೆಯುತ್ತಿರುವ ಈ ಸಮ್ಮೇಳನವನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಒಟ್ಟುಗೂಡಿ ನಡೆಸಲಿವೆ ಎಂದರು.

ಬಳ್ಳಾರಿ ಕನ್ನಡದ ಅಸ್ಮಿತೆ ತೋರಿದ ಜಿಲ್ಲೆಯಾಗಿದೆ. ಸಾಂಸ್ಕೃತಿಕವಾಗಿ ಬಳ್ಳಾರಿ ಮತ್ತು ವಿಜಯನಗರ ಒಂದೇ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಬಾರಿ ಸಾಹಿತ್ಯ ಸಮ್ಮೇಳನ ನಡೆದಿದೆ. ಹೊಸಪೇಟೆಯಲ್ಲಿ 1920ರಲ್ಲಿ ಆರನೇ ಸಾಹಿತ್ಯ ಸಮ್ಮೇಳನ, 1926 ರಲ್ಲಿ 12ನೇ ಸಾಹಿತ್ಯ ಸಮ್ಮೇಳನ, 1947ರಲ್ಲಿ 30ನೇ ಮತ್ತು 1958ರಲ್ಲಿ 50ನೇ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಇದೀಗ ಸುದೀರ್ಘ 67 ವರ್ಷದ ಬಳಿಕ 88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜನೆ ಮಾಡಲಾಗಿದೆ ಎಂದು ಜೋಶಿ ಮಾಹಿತಿ ನೀಡಿದರು.

































error: Content is protected !!
Scroll to Top