ಕಾರ್ಕಳ : ಕಾರ್ಕಳ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಪ್ರಶಾಂತ್ ರಾವ್ ಎಂ. ವಿ ಅವರು ಪ್ರಭಾರ ನೆಲೆಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಕಳ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಕೃಷ್ಣಾನಂದ, ಸಹಾಯಕ ನಿರ್ದೇಶಕ ರಮೇಶ್, ವ್ಯವಸ್ಥಾಪಕ ಹರೀಶ್ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು. ಕಾರ್ಕಳದಲ್ಲಿ ಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜಿ., ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಹೊಂದಿರುತ್ತಾರೆ.
ಕಾರ್ಕಳ ತಾ.ಪಂ. ಇಓ ಆಗಿ ಪ್ರಶಾಂತ್ ರಾವ್ ಅಧಿಕಾರ ಸ್ವೀಕಾರ





