ರಾಜ್ಯದ ಶ್ರೀಮಂತ ದೇವಸ್ಥಾನದಲ್ಲಿ ನಂ. 1 ಸ್ಥಾನ
ಮಂಗಳೂರು : ಕರ್ನಾಟಕದ ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಮಹತೋಭಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗುತ್ತಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ದತ್ತಿ ಇಲಾಖೆಯಡಿ ಬರುತ್ತದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ.









