ಜನಿವಾರ ತೆಗೆಸಿ ಸಿಇಟಿ ಪರೀಕ್ಷೆ ಪ್ರಕರಣ : ಈರ್ವರು ಹೋಮ್ ಗಾರ್ಡ್‌ಗಳ ಅಮಾನತು

ಶಿವಮೊಗ್ಗ : ಜನಿವಾರ ತೆಗೆಸಿ ಸಿಇಟಿ ಪರೀಕ್ಷೆ ಬರೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಪಿಯು ಕಾಲೇಜಿನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಹೇಳಿದ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಬ್ರಾಹ್ಮಣ ಸಭಾದ ನಟರಾಜ್ ಭಾಗವತ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಹಾಗೂ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಜನಿವಾರ ತೆಗೆಯುವಂತೆ ಹೇಳಿರುವುದು ವಿದ್ಯಾರ್ಥಿಗಳ ಹಾಗೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಬ್ಬರು ಗೃಹ ರಕ್ಷಕರನ್ನು ಅಮಾನತುಗೊಳಿಸಿದ್ದು, ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗಿದೆ.









































































































error: Content is protected !!
Scroll to Top