ಅಮೃತ ಭಾರತಿಯಲ್ಲಿ ಇಂಟಿಗ್ರೇಟೆಡ್ ತರಗತಿ ಆರಂಭ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಜೆಇಇ ಮತ್ತು ನೀಟ್ ಪರೀಕ್ಷೆಗೆ ಸಿದ್ದಗೊಳಿಸಲು ವಿಶೇಷ ಇಂಟಿಗ್ರೇಟೆಡ್ ತರಗತಿ ಆರಂಭಗೊಳಿಸಲಾಗಿದೆ.
ಭೌತಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕ ರಮೇಶ್ ಹಂದೆ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದೆಂದು ನಮ್ಮ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಎಲ್ಲಾ ರೀತಿಯಾದ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಆರಂಭಗೊಂಡ ಇಂಟಿಗ್ರೇಟೆಡ್ ತರಗತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ದೃಷ್ಟಿಯಿಂದ ಅಮೃತ ಭಾರತಿ ಕಳೆದ ನಾಲ್ಕು ವರ್ಷಗಳಿಂದ ವಿಶೇಷ ಇಂಟಿಗ್ರೇಟೆಡ್ ತರಗತಿಗಳನ್ನು ನಡೆಸಿಕೊಂಡು ಬರುತ್ತಿದ್ದು, ಅನೇಕ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಈ ವಿಶೇಷ ತರಗತಿಯ ಅವಕಾಶವನ್ನು ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ತಕ್ಷಣದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕ ಸುದರ್ಶನ್ ಶೆಟ್ಟಿ ಕಾರ್ಯಕ್ರಮ ಸಂಘಟಿಸಿ, ವಿದ್ಯಾರ್ಥಿಗಳಾದ ಸುತೇಜ ಸ್ವಾಗತಿಸಿದರು. ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.





























































































































error: Content is protected !!
Scroll to Top