ರೋಮ್ : ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ನಗರದಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ. ಪೋಪ್ ಫ್ರಾನ್ಸಿಸ್ ಕಳೆದೊಂದು ವಾರದಿಂದ ಶ್ವಾಸಕೋಶ ಸಂಬಂಧಿತ ಸೋಂಕಿನಿಂದ ಬಳಲುತ್ತಿದ್ದರು. ಫೆಬ್ರವರಿ 14 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ತೀವ್ರವಾದ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು.
ಪೋಪ್ ಫ್ರಾನ್ಸಿಸ್ ಅವರ ನಿಧನ ವಾರ್ತೆಯನ್ನು ವ್ಯಾಟಿಕನ್‌ನ ಕ್ಯಾಮರ್ಲೆಂಗೊ ಕಾರ್ಡಿನಲ್, ಕೆವಿನ್ ಫಾರೆಲ್ ಘೋಷಿಸಿದರು. ಕ್ಯಾಮರ್ಲೆಂಗೊ ಕಾರ್ಡಿನಲ್ ಎಂಬುದು ವ್ಯಾಟೆಕಿನ್ ನಗರದಲ್ಲಿ ಆಡಳಿತಾತ್ಮಕ ಹುದ್ದೆಯಾಗಿದ್ದು, ನಗರದ ಖಜಾನೆ ಮತ್ತು ಆಡಳಿತಾತ್ಮಕ ಕೆಲಸಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದೆ.
ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕನ್ ನಾಯಕರಾಗಿದ್ದ ಪೋಪ್ ಬೆನೆಡಿಕ್ಟ್ ರಾಜೀನಾಮೆ ನೀಡಿದ ನಂತರ 2013ರಲ್ಲಿ ಫ್ರಾನ್ಸಿಸ್ ಅವರು ಪೋಪ್ ಆಗಿದ್ದರು.






















