ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ‌ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ : ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ‌ ಸಾವನ್ನಪ್ಪಿದ ಘಟನೆ ಕಾಂತಾವರದಲ್ಲಿ‌ ಸಂಭವಿಸಿದೆ. ಚಂದ್ರಶೇಖರ (55) ಮೃತದುರ್ದೈವಿ.‌ ಇವರು ಎ. 13ರಂದು ಕಾಂತಾವರ ಗ್ರಾಮದ ಕವೈಲ್‌ ದರ್ಖಾಸು ಮನೆ ಕಿರಣ್‌ರವರ ಜಾಗದಲ್ಲಿದ್ದ ಮಾವಿನ ಮರದ ಗೆಲ್ಲು ಕಡಿಯುತ್ತಿರುವಾಗ ಆಯತಪ್ಪಿ ಮರದಿಂದ ನೆಲಕ್ಕೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಂದ್ರಶೇಖರ ಚಿಕಿತ್ಸೆಗೆ ಸ್ಪಂದಿಸದೆ ಎ. 21 ರಂದು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































































error: Content is protected !!
Scroll to Top