ಸಹಕಾರ ಭಾರತಿಯ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ದಿನೇಶ್‌ ಹೆಗ್ಡೆ ಆತ್ರಾಡಿ ಮನವಿ

ಉಡುಪಿ : ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ. 26 ರಂದು ನಡೆಯುವ ಚುನಾವಣೆಯಲ್ಲಿ 8 ಕ್ಷೇತ್ರಗಳಿಗೂ ಸಹಕಾರ ಭಾರತಿಯ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮತದಾರರು ಸಹಕಾರ ಭಾರತಿಯ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ದಿನೇಶ್‌ ಹೆಗ್ಡೆ ಆತ್ರಾಡಿ ವಿನಂತಿಸಿದ್ದಾರೆ.

ಎ. 22ರಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿರುವ ದಿನೇಶ್ ಹೆಗ್ಡೆ ಆತ್ರಾಡಿ, ಸಹಕಾರ ಭಾರತಿ ಬೆಂಬಲದೊಂದಿಗೆ ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಮೋಹನ್‌ದಾಸ್ ಅಡ್ಯಂತಾಯ (ಕಾರ್ಕಳ), ಭೋಜ ಪೂಜಾರಿ (ಹೆಬ್ರಿ), ಅಶೋಕ್ ರಾವ್ (ಕಾಪು), ಹೆರ್ಗ ದಿನಕರ್ ಶೆಟ್ಟಿ (ಉಡುಪಿ), ಕಾಡೂರು ಸುರೇಶ್ ಶೆಟ್ಟಿ (ಕುಂದಾಪುರ), ಸುಬ್ಬಣ್ಣ ಶೆಟ್ಟಿ & ಟಿವಿ. ಪ್ರಾಣೇಶ್ ಯಡಿಯಾಳ್ (ಬೈಂದೂರು), ಮಹಿಳಾ ಮೀಸಲಾತಿ ಕ್ಷೇತ್ರದಲ್ಲಿ ಶಾಂತಾ ಎಸ್. ಭಟ್ (ಬ್ರಹ್ಮಾವರ) ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ರವಿರಾಜ್‌ ಹೆಗ್ಡೆ ಯೂಟರ್ನ್‌
ಸಹಕಾರ ಭಾರತಿಯ ಬೆಂಬಲದೊಂದಿಗೆ ಕಳೆದ 18 ವರ್ಷಗಳ ಕಾಲ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಕೆಎಂಎಫ್ ಪ್ರತಿನಿಧಿಯಾಗಿ ಸ್ಕಾಡ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನಿರಂತರ ಸ್ಥಾನಮಾನಗಳನ್ನು ಪಡೆದಿದ್ದ ಕೊಡವೂರು ರವಿರಾಜ್ ಹೆಗ್ಡೆ, ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆವರೆಗೆ ಸಹಕಾರ ಭಾರತಿಯೊಂದಿಗೆ ಇದ್ದು, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೊಸಬರಿಗೆ ಅವಕಾಶ ನೀಡಿ ಎಂದು ಹೇಳಿದ್ದರು. ಇದೀಗ ಅವರೇ ಕಾಂಗ್ರೆಸ್ ಬೆಂಬಲಿತ ಕೂಟದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಬೆಂಬಲಿತವಾಗಿ ಕೊಡವೂರು ರವಿರಾಜ್ ಹೆಗ್ಡೆ, ಮಮತಾ ಶೆಟ್ಟಿ, ಸ್ವತಂತ್ರವಾಗಿ ಸ್ಪರ್ಧಿಸುವ ಕಮಲಾಕ್ಷ ಹೆಬ್ಬಾರ್ ಹಾಗೂ ಸಿತ್ಮಾ ಆರ್. ಶೆಟ್ಟಿ ಸಹಕಾರ ಭಾರತಿಯ ವಿರುದ್ದ ಸ್ಪರ್ಧಿಸುತ್ತಿದ್ದಾರೆ. ಹೈನುಗಾರರು ಗೊಂದಲಕ್ಕೆ ಒಳಗಾಗದೇ, ಸಹಕಾರ ಭಾರತಿಯ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರ. ಕಾರ್ಯದರ್ಶಿ ನರಸಿಂಹ ಕಾಮತ್, ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ಜಿ. ಪ್ರ‌‌‌. ಕಾರ್ಯದರ್ಶಿ ಸುದೇಶ್ ನಾಯಕ್ ಉಪಸ್ಥಿತರಿದ್ದರು.





























































































































error: Content is protected !!
Scroll to Top