ಜಮ್ಮು ಕಾಶ್ಮೀರ : 26 ಜನರನ್ನು ಬಲಿ ಪಡೆದಿರುವ ಪಹಲ್ಗಾಮ್ ಉಗ್ರರ ದಾಳಿ ವಿರುದ್ಧ ಕಾರ್ಯಾಚರಣೆಗಿಳಿದಿರುವ ಭಾರತೀಯ ಸೇನೆ ಈಗ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಬಾರಾಮುಲ್ಲಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ. ಅಲ್ಲದೆ ಭಯೋತ್ಪಾದಕರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ದಾಸ್ತಾನುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಕಾರ್ಯಾಚರಣೆಗಿಳಿದ ಎಎಲ್ಹೆಚಚ್ ಧ್ರುವ ಹೆಲಿಕಾಪ್ಟರ್ಗಳ
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸೇನೆಯ ಎಎಲ್ಹೆಚ್ ಧ್ರುವ ಹೆಲಿಕಾಪ್ಟರ್ಗಳನ್ನು ಶ್ರೀನಗರ, ಜೆ & ಕೆ ಮತ್ತು ಪಕ್ಕದ ಪ್ರದೇಶಗಳಲ್ಲಿ ಹಾರಲು ಅನುಮತಿಸಲಾಗಿದೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಜರಾತ್ನ ಪೋರ್ ಬಂದರ್ನಲ್ಲಿ ಭಾರತೀಯ ಕರಾವಳಿ ಕಾವಲು ಅಧಿಕಾರಿಗಳಿದ್ದ ಧ್ರುವ ಹೆಲಿಕಾಫ್ಟರ್ ಅಪಘಾತದ ನಂತರ ಎಎಲ್ಹೆಚ್ ಧ್ರುವ ಹೆಲಿಕಾಪ್ಟರ್ಗಳನ್ನು ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಹಾರಾಟ ಸ್ಥಗಿತಗೊಳಿಸಲಾಗಿತ್ತು.






























































