ಇಸ್ಲಾಮಾಬಾದ್ : ಪೆಹಲ್ಗಾಮ್ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ಮತ್ತ ಭಾರತ ನಡುವೆ ಯಾವಾಗ ಯುದ್ಧ ಸಂಭವಿಸುತ್ತದೆ ಎನ್ನಲು ಸಾಧ್ಯವಿಲ್ಲ. ಈ ನಡುವೆ ಭಾರತದ ವಿರುದ್ಧ ಯುದ್ಧಕ್ಕೆ ತಯಾರಾದಂತೆ ವರ್ತಿಸುತ್ತಿರುವ ಪಾಕಿಸ್ತಾನಕ್ಕೆ ಅಲ್ಲಿನ ಸೈನಿಕರೇ ಶಾಕ್ ನೀಡುತ್ತಿದ್ದಾರೆ. ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.
ಕೆಲವು ಸೈನಿಕರು ತಮ್ಮ ಸುರಕ್ಷತೆಯ ಬಗ್ಗೆ ಭಯಗೊಂಡು ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಈಗಾಲೇ ಕೆಲವರು ರಾಜೀನಾಮೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಸೈನಿಕರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್ ನೀಡಿದ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ










