ದೇಶ ವಿರೋಧಿ ಪೋಸ್ಟ್‌ : ಮಂಗಳೂರು ವೈದ್ಯೆ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು : ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆಯ ಎಫ್‌ಐಆರ್‌ ದಾಖಲಾಗಿದೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.









































































































error: Content is protected !!
Scroll to Top