ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ 1 ಲಕ್ಷ ರೂ. ಹಸ್ತಾಂತರ

ಕಾರ್ಕಳ : ಮಂಗಳೂರಿನ ಬಜ್ಪೆ ಕಿನ್ನಿಪದವಿನಲ್ಲಿ ಮೇ 1ರಂದು ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಬಂಟ್ವಾಳ ಕಾರಿಂಜದ ಸುಹಾಸ್ ಶೆಟ್ಟಿಯ ಮನೆಗೆ ಮೇ 5 ರಂದು ಕಾರ್ಕಳ ಬಿಜೆಪಿ ಯುವಮೋರ್ಚಾ ತಂಡ ಬೇಟಿ ನೀಡಿತು. ಸಂತಾಪ ಸೂಚಿಸಿದ ತಂಡ ಸುಹಾಸ್‌ ಶೆಟ್ಟಿಯ ತಂದೆ ತಾಯಿಗೆ ಒಂದು ಲಕ್ಷ ರೂ. ಸಹಾಯ ಧನ ಹಸ್ತಾಂತರಿಸಿದರು.

ಈ ಸಂದರ್ಭ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುಹಾಸ್ ಶೆಟ್ಟಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಲಾಲ್, ಕಾರ್ಕಳ ತಾಲೂಕು ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಕಾರ್ಕಳ ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಹಾಗೂ ಪ್ರಕಾಶ್ ಶೆಟ್ಟಿ ಮುನಿಯಾಲು, ದೇವೇಂದ್ರ ಶೆಟ್ಟಿ ಬೆಳ್ಮಣ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.





























































































































error: Content is protected !!
Scroll to Top