ಕ್ರೈಸ್ಟ್‌ಕಿಂಗ್‌ : ಎಸ್ಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ರ‍್ಯಾಂಕ್ ವಿಜೇತರಿಗೆ ಸನ್ಮಾನ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಮೇ 6ರಂದು ಸನ್ಮಾನ ಕಾರ್ಯಕ್ರಮ ನಡೆಯಿತು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದ ಸುದೀಕ್ಷಾ ಶೆಟ್ಟಿ, ಎಂಟನೇ ರ‍್ಯಾಂಕ್ ಪಡೆದ ಚರಣ್‌ ರಾಜ್, ನಾರಾಯಣಿ ಜಿ. ಕಿಣಿ, ಒಂಬತ್ತನೇ ರ‍್ಯಾಂಕ್ ಪಡೆದ ಡ್ಯಾರೆಲ್ ವಿನೋಲ್ ಮೊರಾಸ್ ಹಾಗೂ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದ ಅನಂತ್ ಎನ್. ಕೆ. ಮತ್ತು ಎಸ್ಸೆಸೆಲ್ಲಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಪ್ರಕೃತಿ ಪಿ. ಗುಡಿಗಾರ್, ಎಂಟನೇ ರ‍್ಯಾಂಕ್ ಪಡೆದ ಆದಿಶ್ರೀ ಎಂ. ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಕ್ರೈಸ್ಟ್‌ಕಿಂಗ್‌ ಎಜ್ಯುಕೇಷನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಕರ್ನಾಟಕ ಸರಕಾರದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ರೈಸ್ಟ್‌ಕಿಂಗ್‌ ಚರ್ಚ್‌ನ ಧರ್ಮಗುರು ರೆ. ಫಾ. ಕ್ಲೆಮೆಂಟ್ ಮಸ್ಕರೇನ್ಹಸ್, ಉದ್ಯಮಿ ವಿವೇಕಾನಂದ ಶೆಣೈ, ಭಾರತ್ ಸ್ಕೌಟ್ ಮತ್ತು ಗೈಡ್ಸ್‌ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ನಿವೃತ್ತ ಆಂಗ್ಲ ಭಾಷಾ ಉಪನ್ಯಾಸಕಿ ಮಾಲತಿ ವಸಂತ್‌ರಾಜ್, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷೆ ಹುಮೈರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.































































































































error: Content is protected !!
Scroll to Top