ದಕ್ಷಿಣ ಕನ್ನಡ ಹಾಲು ಉತ್ಪಾದಕರ ಮಹಾ ಮಂಡಳಿಯ ಅಧ್ಯಕ್ಷರಾಗಿ ರವಿರಾಜ್‌ ಹೆಗ್ಡೆ – ಉಪಾಧ್ಯಕ್ಷರಾಗಿ ಉದಯ್‌ ಕೋಟ್ಯಾನ್

ಕಾರ್ಕಳ : ದಕ್ಷಿಣ ಕನ್ನಡ ಹಾಲು ಉತ್ಪಾದಕರ ಮಹಾ ಮಂಡಳಿಯ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ್‌ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಕಾರ್ಕಳದ ಉದಯ್‌ ಎಸ್‌. ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 6ರಂದು ಒಕ್ಕೂಟದ ಕಚೇರಿಯಲ್ಲಿ ಮುಂದಿನ 5 ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಕೊಡವೂರು ರವಿರಾಜ್‌ ಹೆಗ್ಡೆ ಅವರು ಕಳೆದ 18 ವರ್ಷಗಳಿಂದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಮಹಾ ಮಂಡಳಿಯಲ್ಲಿ ಸಕ್ರಿಯರಾಗಿದ್ದು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಕಾರ್ಯಾಚರಿಸುತ್ತಿದ್ದಾರೆ. ಉದಯ್‌ ಎಸ್‌. ಕೋಟ್ಯಾನ್‌ ಅವರು 2014-19ರ ಅವಧಿಯಲ್ಲಿ ಕೆಎಂಎಫ್‌ ನಿರ್ದೇಶಕರಾಗಿ, ಇರ್ವತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.





























































































































error: Content is protected !!
Scroll to Top