ಹೆಬ್ರಿ ಕಸಾಪ – ಕನ್ನಡ ರಸಪ್ರಶ್ನೆ, ಉಪನ್ಯಾಸ ಕಾರ್ಯಕ್ರಮ

ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಹೆಬ್ರಿ ತಾಲೂಕು ಘಟಕದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ‘ಕನ್ನಡ ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸ ಕಾರ್ಯಕ್ರಮ’ ಬುಧವಾರ ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಉದ್ಯಮಿ ದಿನೇಶ ಪೈ ಕಾರ್ಯಕ್ರಮ ಉದ್ಘಾಟಿಸಿದರು.

ಉದ್ಯಮಿ ಮುನಿಯಾಲು ಗೋಪಿನಾಥ ಭಟ್ ಮಾತನಾಡಿ, ಕಸಾಪ ಹೆಬ್ರಿ ತಾಲೂಕು ಘಟಕವು ಕನ್ನಡಕ್ಕಾಗಿ ಅನೇಕ ರೀತಿಯಲ್ಲಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಜ್ಞಾನ, ಆಸಕ್ತಿ ಹೆಚ್ಚಿಸಲು ಇಂತಹ ಕಾರ್ಯಕ್ರಮ ಅವಶ್ಯ ಎಂದು ಹೇಳಿದರು.

ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ ಮಾತನಾಡಿ, ಕನ್ನಡ ಹೃದಯದ ಭಾಷೆಯಾಗಬೇಕು. ಅದನ್ನು ಎಂದೂ ಮರೆಯುವಂತಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಸ್ಪರ್ಧೆಯೂ ಇದೆ ಅವಕಾಶಗಳೂ ಇವೆ. ಗುರಿಯ ಕಡೆ ಏಕಾಗ್ರ ಚಿತ್ತವಾಗಿ ಸಾಗಿದರೆ ಯಶಸ್ಸು ಖಂಡಿತ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಮುದ್ದೂರು ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಧಾಕರ ಕೆ.ಜಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್‌ ಹೆಬ್ರಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಪ್ರವೀಣ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ಆರ್. ಭಟ್ ಸ್ವಾಗತಿಸಿದರು. ಮಂಜುನಾಥ ಕೆ. ಶಿವಪುರ ನಿರೂಪಿಸಿ, ಮಹೇಶ ಹೈಕಾಡಿ ವಂದಿಸಿದರು.



































































































error: Content is protected !!
Scroll to Top