ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಬೆಂಗಳೂರು : ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು. ಇದೀಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.









































































































error: Content is protected !!
Scroll to Top