ʼಆಪರೇಷನ್‌ ಸಿಂಧೂರʼ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿದ ಟೆಕ್ಕಿಯ ಬಂಧನ

ಬೆಂಗಳೂರು : ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನ ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ನಡೆದಿದೆ. ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ.

ಛತ್ತಿಸ್‌ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ ಬಾಲ್ಕನಿಗೆ ಬಂದು ಪಾಕಿಸ್ತಾನ ಪರ ಜೋರಾಗಿ ಘೋಷಣೆ ಕೂಗಿದ್ದಾನೆ. ಆತಂಕಗೊಂಡ ಕೆಲ ಪಿಜಿ ಯುವಕರು ಹೊರಬಂದು ನೋಡಿದಾಗ ಶುಭಾಂಶು ಬಾಲ್ಕನಿಯಲ್ಲಿ ನಿಂತು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ. ಬಳಿಕ ಪೊಲೀಸ್‌ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ವೈಟ್‌ಫೀಲ್ಡ್‌ ಪೊಲೀಸರು ಆತನನ್ನ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

















































































error: Content is protected !!
Scroll to Top