ಕಾರ್ಕಳ : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ 2ರ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 16ರಂದು ಪ್ರಕಟಗೊಂಡಿದ್ದು ಕ್ರೈಸ್ಟ್‌ಕಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಹತ್ತರೊಳಗೆ ರ‍್ಯಾಂಕ್ ಪಡೆದುಕೊಂಡಿದ್ದಾರೆ. ದ್ವಿತೀಯ ವಿಜ್ಞಾನ ವಿಭಾಗದ ಶ್ರೀಯಾ 595 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ. ರಶ್ಮೀ ಹಾಗೂ ಅಮೂಲ್ಯ 591 ಅಂಕಗಳೊಂದಿಗೆ 10ನೇ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ.
ಈ ಮೂಲಕ ಸಂಸ್ಥೆಯು ಈ ವರ್ಷದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕು ಹಾಗೂ ವಾಣಿಜ್ಯ ವಿಭಾಗದಲ್ಲಿ ನಾಲ್ಕು ರ‍್ಯಾಂಕ್‌ಗಳೊಂದಿಗೆ ಒಟ್ಟು ಎಂಟು ರ‍್ಯಾಂಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ : ಕ್ರೈಸ್ಟ್‌ಕಿಂಗ್‌ನ ಮೂವರಿಗೆ ರ‍್ಯಾಂಕ್















































