ಪ್ರಧಾನಿ ಮೋದಿಗಾಗಿ ಕೊರಗಜ್ಜನಿಗೆ ಬಿಜೆಪಿಯಿಂದ ಹರಕೆಯ ಕೋಲ

ಮಂಗಳೂರು : ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಬಿಜೆಪಿ ಜಯನಗರ ಬೂತ್ ಸಮಿತಿ ಶ್ರೀ ಕೊರಗಜ್ಜ ದೈವಕ್ಕೆ ಹರಕೆ ಹೇಳಿತ್ತು. ಅಂತೆಯೇ ಬಜೆಪಿ ಜಯನಗರ ಬೂತ್‌ ಸಮಿತಿ ಮತ್ತು ಬಿಜೆಪಿ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಸಹಯೋಗದೊಂದಿಗೆ ಮೇ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವಕ್ಕೆ ಹರಕೆಯ ನೇಮೋತ್ಸವ ಹಾಗೂ ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು.

ಈ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಘಟಕ ಸಂಸದ ಬ್ರಿಜೇಶ್ ಚೌಟ ಮೂಲಕ ಕೊರಗಜ್ಜ ದೈವದ ಪ್ರಸಾದವನ್ನು ಪ್ರಧಾನಿ ನರೇಂದ್ರ ಮೋದಿಗೆ ತಲುಪಿಸಲಾಗುವುದು ಎಂದು ಸಮಿತಿ ತಿಳಿಸಿದೆ.































































































error: Content is protected !!
Scroll to Top