ಪತ್ತೊಂಜಿಕಟ್ಟೆ – ಗಾಳಿ ಮಳೆಗೆ ವಿದ್ಯುತ್‌ ಕಂಬಗಳು ಧರಶಾಹಿ

ಕಾರ್ಕಳ : ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ತಾಲೂಕಿನ ವಿವಿಧೆಡೆ ಹಾನಿ ಸಂಭವಿಸಿದೆ. ಮೇ 23ರಂದು ಸಂಜೆ ಸುರಿದ ಗಾಳಿ ಮಳೆಗೆ ಪತ್ತೊಂಜಿಕಟ್ಟೆಯ ಒಂದನೇ ಅಡ್ಡರಸ್ತೆಯಲ್ಲಿ ಮರ ಬಿದ್ದು 3 ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, 2 ವಿದ್ಯುತ್‌ ಕಂಬ ರಸ್ತೆಗೆ ವಾಲಿದೆ. ಈ ಬಗ್ಗೆ ಸ್ಥಳೀಯರು ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ ಮುರಿದು ಬಿದ್ದ ವಿದ್ಯುತ್‌ ಕಂಬ ತೆರವುಗೊಳಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.































































error: Content is protected !!
Scroll to Top