ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿಯಾಗಿರುವ ಘಟನೆ ತಲೆತಗ್ಗಿಸುವಂಥದ್ದು

ಬೆಂಗಳೂರು : ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿಯಾಗಿರುವುದು ತಲೆತಗ್ಗಿಸುವಂಥ ಘಟನೆ. ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಭೆ ಕರೆದಿದ್ದೇನೆ, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ, ಸ್ವಂತಿಕೆ ಪ್ರದರ್ಶಿಸಲಿಲ್ಲ. ಸರಿಯಾಗಿ ನಡೆದುಕೊಳ್ಳಲಿಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ. ಪೊಲೀಸರು ಎಲ್ಲೋ ಮೂಲೆಯಲ್ಲಿ ನಿಂತು ದಿಢೀರ್ ಆಗಿ ಎದುರು ಬಂದು ತಡೆಯುತ್ತಾರೆ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಪರಮೇಶ್ವರ್ ಖಡಕ್ ಸೂಚನೆ ನೀಡಿದರು.

ಡ್ರಿಂಕ್ ಅಂಡ್ ಡ್ರೈವ್, ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಇದರೆಲ್ಲದರ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೋ ಅದೇ ರೀತಿ ಕ್ರಮ ಆಗಬೇಕು. ಅಲ್ಲದೇ ಇದರ ಬಗ್ಗೆ ಜಾಗೃತಿ ಮೂಡಿಸಬೇಕು. ವಾಹನ ಸವಾರರು ವೇಗವಾಗಿ ಬರುತ್ತಿರುವಾಗ ಹೋಗಿ ಪೊಲೀಸರು ತಡೆಯುವ ಕೆಲಸ ಮಾಡ್ತಾರೆ. ಇದು ನಿಲ್ಲಬೇಕು ಎಂದರು.
ಇವತ್ತು ಇದೆಲ್ಲದರ ಬಗ್ಗೆ ಚರ್ಚಿಸಿ ಸೂಚನೆ ಕೊಡ್ತೇವೆ. ನಿನ್ನೆ ಪೋಷಕರು ಮಗುವಿಗೆ ನಾಯಿ ಕಚ್ಚಿದೆ ಕರ್ಕೊಂಡು ಹೋಗ್ತಿದೀವಿ ಎಂದ್ರೂ ಪೊಲೀಸರು ಬಿಡಲಿಲ್ಲ. ಇಂಥ ಸಂದರ್ಭಗಳಲ್ಲಿ ಪೊಲೀಸರು ಸ್ವಂತಿಕ ಪ್ರದರ್ಶನ ಮಾಡಬೇಕು. ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.



































































































error: Content is protected !!
Scroll to Top