ಜೋಡುಕಟ್ಟೆ- ಬೋರ್ಕಟ್ಟೆ- ರೆಂಜಾಳ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರು : ಸುನಿಲ್‌ ಕುಮಾರ್

ಕಾರ್ಕಳ : ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸರಕಾರದಿಂದ 5 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ವಿ.‌ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಬಹಳಷ್ಟು ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕ ಸುನಿಲ್‌ ಕುಮಾರ್‌ ಅವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು ಕೂಡಲೇ ಕಾಮಗಾರಿ ಪ್ರಾರಂಭವಾಗಲಿದೆ.









































































































error: Content is protected !!
Scroll to Top