ಶಿವಮೊಗ್ಗ : ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಜಿ. ಪರಮೇಶ್ವರ ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸ್ ಕಮಿಷನರ್ ಜೊತೆ ಮಾತಾಡಿದ್ದೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇದು ಅತ್ಯಂತ ನೋವಿನ ಸಂಗತಿ. ಮಂಗಳೂರಿನ ಈ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಹಾಗೂ ಸಂಘ ಪರಿವಾರದವರು ಕಾರಣ. ಅವರದ್ದು ವಿಷ, ಕೊಳಕು ತುಂಬಿದ ಮನಸ್ಸು. ಅವರಿಗೆ ಮಾನವೀಯತೆ, ಮನುಷ್ಯತ್ವ ಯಾವುದು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಸಂಘ ಪರಿವಾರದವರಿಗೆ ಒಂದು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯ ಇದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.






































