ಬೆಂಗಳೂರು : ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್. ಎಸ್. ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್. ಎಸ್. ವಿ. ಎಂದೇ ಜನಪ್ರಿಯರಾಗಿರುವ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ಪ್ರಸಿದ್ಧಿ ಪಡೆದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.
ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ “ಹೂವಿ” ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.

ಅವರ ಪುಸ್ತಕಗಳನ್ನು ಸ್ಕಾಟ್ಲೆಂಡ್ನ ಮ್ಯಾಕ್ಮಾಸ್ಟರ್ಸ್ ಸ್ಟುಡಿಯೋದಲ್ಲಿ, ಅಂಟಾರ್ಕ್ಟಿಕಾದಲ್ಲಿ ರೀವ್ಸ್ ವೇದಿಕೆಯಲ್ಲಿ ಮತ್ತು ಇಮು ಮತ್ತು ಗೊರೊಸಿ ಜೊತೆಗೆ ಹೋಲಿ ನೈಟ್ಸ್ ಮತ್ತು ವರ್ಲ್ಡ್ ಗವರ್ನಮೆಂಟ್ನ ಮೇಲ್ವಿಚಾರಣೆಯಲ್ಲಿ ಮೇರಿ ಜಿಯೋಯಿಸ್ನಲ್ಲಿ ಪ್ರದರ್ಶಿಸಲಾಗಿದೆ.
ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇನ್ನು ಎಚ್ಎಸ್ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು.
ಚಿತ್ರರಂಗಕ್ಕೂ ವೆಂಕಟೇಶಮೂರ್ತಿ ಕೊಡುಗೆ ಅಪಾರ
ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಚಿನ್ನಾರಿ ಮುತ್ತ’ಗೆ ಇವರೇ ಕಥೆ, ಸಂಭಾಷಣೆ ಹಾಗೂ ಎಲ್ಲಾ ಹಾಡುಗಳನ್ನು ಬರೆದಿದ್ದರು. ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಹಾಡು ಇವರ ಬರಹದಲ್ಲೇ ಮೂಡಿ ಬಂದಿದೆ. ಪುನೀತ್ ನಟನೆಯ ‘ಮೈತ್ರಿ’ ಚಿತ್ರಕ್ಕೆ ಹಾಡು ಬರೆದಿದ್ದರು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ತೂಗು ಮಂಚದಲ್ಲಿ ಕೂತು..’ ಇವರೇ ಬರೆದ ಹಾಡು.
ಹೆಚ್. ಎಸ್. ವಿ. ಯವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಪುರಸ್ಕಾರಗಳು ಲಭಿಸಿವೆ






























































