ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳ ಬಂಧನವಾಗಿದೆ. ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಬಂಧಿತ ಆರೋಪಿಗಳು.
ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆದಿದೆ ಅನ್ನೋದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ನಿಖರ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ. ಪೂರ್ವದ್ವೇಷದ ಹತ್ಯೆಯೋ, ಕೋಮುದ್ವೇಷದ ಹತ್ಯೆಯೋ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರದ ಹತ್ಯೆಯೋ ಅನ್ನೋದು ಖಚಿತಗೊಂಡಿಲ್ಲ. ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ನೇತೃತ್ವದಲ್ಲಿ 5 ವಿಶೇಷ ತಂಡಗಳನ್ನ ಮಾಡಿ ತನಿಖೆ ನಡೆಸುತ್ತಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
































































