ಭಾರಿ ಮಳೆಗೆ ಉಳ್ಳಾಲದಲ್ಲಿ ಎರಡು ಮನೆಗಳ ಮೇಲೆ ಗುಡ್ಡ ಕುಸಿತ

ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (6) ಎನ್ನುವ ಮಗು ಮೃತಪಟ್ಟಿದೆ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.

ಭಾರಿ ಮಳೆಯ ಪರಿಣಾಮ ಮಂಗಳೂರು ಸುತ್ತಮುತ್ತಲಿನ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾ‌ರ್, ಅಂಬಿಕಾರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳು ಜಲಾವೃತವಾಗಿವೆ. ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೆರೆಯಿಂದ ಸಮಸ್ಯೆಯಾಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ತೀವ್ರ ಹಾನಿಯಾಗಿದ್ದು, ರಾತ್ರಿಯೇ ಸಂತ್ರಸ್ತ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಜೂನ್​ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.









































































































error: Content is protected !!
Scroll to Top