ಹಿಂದೂ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದಾರೆ.

ಗಡಿಪಾರು ನೋಟಿಸ್​ನಲ್ಲೇನಿದೆ?
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ನೋಟಿಸ್​​ನಲ್ಲಿ ಉಲ್ಲೇಖಿಸಿಲ್ಲ.









































































































error: Content is protected !!
Scroll to Top