ರಾಜ್ಯದಲ್ಲಿ ‘ಥಗ್ ಲೈಫ್’ ಚಿತ್ರದ ಸುಗಮ ಪ್ರದರ್ಶನಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್

ಬೆಂಗಳೂರು : ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟ ಕಮಲ್​ ಹಾಸನ್ ಅವರ ‘ಥಗ್ ಲೈಫ್’ ಚಿತ್ರಕ್ಕೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಕಮಲ್ ಹಾಸನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಇತ್ತೀಚೆಗೆ ಘೋಷಿಸಿದೆ. ಈ ನಡುವೆ ಚಿತ್ರಕ್ಕೆ ಅಡ್ಡಿಪಡಿದಂತೆ ನಟ ಕಮಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ʻಥಗ್‌ ಲೈಫ್‌ʼ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಚಲನಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಕೆಯಾಗಿದ್ದು, ಮೇಲ್ವಿಚಾರಣೆ ಬಾಕಿಯಿದೆ. ಆದರೆ ಈ ಬಗ್ಗೆ ಕಮಲ್‌ ಹಾಸನ್‌ ಎಲ್ಲಿಯೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.





























































































error: Content is protected !!
Scroll to Top