ದ.ಕ – ಉಡುಪಿ ಜಿಲ್ಲೆಯಲ್ಲಿ ʼಪೊಲೀಸ್ ರಾಜ್ʼ ವ್ಯವಸ್ಥೆ ಜಾರಿ ?

ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರಕಾರ ʼಪೊಲೀಸ್ ರಾಜ್ʼ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಟೀಕಿಸಿದ್ದಾರೆ.

ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಖುದ್ದು ರಾಜ್ಯ ಸರಕಾರವೇ ದ್ವೇಷ ಭಾಷೆಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಸೀಮಿತಗೊಳಿಸುತ್ತಿದೆ. ಸರಕಾರದ ಏಕಪಕ್ಷೀಯ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದು ಸುನಿಲ್‌ ಕುಮಾರ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು‌ ಕ್ರಮವೇ? ಎಂದು ಪ್ರಶ್ನಿಸಿರುವ ಸುನಿಲ್ ಕುಮಾರ್‌ ಪೊಲೀಸರ ಈ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧತೆ ಮೂಡಿಸುವುದಕ್ಕೆ ಕಾರಣವಾಗುತ್ತದೆ. ಎಫ್‌ಐಆರ್ ಅಸ್ತ್ರ ಬಳಸಿ ಶಾಂತಿ ಸ್ಥಾಪನೆಯ ಭ್ರಮೆ ಬೇಡ. ಸಮಾಜದ ಎಲ್ಲ ವರ್ಗದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮೊದಲು ಮಾಡಿ ಎಂದು ಅವರು ಸಲಹೆ ನೀಡಿದ್ದಾರೆ.









































































































error: Content is protected !!
Scroll to Top