ಜೆಇಇ ಅಡ್ವಾನ್ಸ್ಡ್ : ಕ್ರೈಸ್ಟ್‌ಕಿಂಗ್‌ನ ಅನಂತ್ ಎನ್. ಕೆ. 11072ನೇ ರ‍್ಯಾಂಕ್

ಕಾರ್ಕಳ‌ : ರಾಷ್ಟ್ರದ ಪ್ರತಿಷ್ಟಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿ‌ ಪೂರ್ವ ಕಾಲೇಜಿನ ವಿದ್ಯಾರ್ಥಿ ಅನಂತ್ ಎನ್. ಕೆ. ಸಾಮಾನ್ಯ ವಿಭಾಗದಲ್ಲಿ 11072ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಅನಂತ್‌ ಜೆಇಇ ಮೈನ್ ಪರೀಕ್ಷೆಯಲ್ಲಿ 99.6912 ಪರ್ಸೆಂಟೈಲ್, ಕೆಸಿಇಟಿ ಫಲಿತಾಂಶದಲ್ಲಿ ಇಂಜಿನಿಯರಿಂಗ್‌ನಲ್ಲಿ ರಾಜ್ಯ ಮಟ್ಟದಲ್ಲಿ 57ನೇ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದನು. ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿಯೂ 593 ಅಂಕಗಳೊಂದಿಗೆ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದಕೊಂಡಿರುತ್ತಾನೆ. ಸಾಧಕ ವಿದ್ಯಾರ್ಥಿಗೆ ಕ್ರೈಸ್ಟ್‌ಕಿಂಗ್‌ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದಸಿದ್ದಾರೆ.





























































































































error: Content is protected !!
Scroll to Top