ಆರ್‌ಸಿಬಿ ಗೆಲುವು ಸಂಭ್ರಮಾಚರಣೆ : ಕಾಲ್ತುಳಿತಕ್ಕೆ 6 ಮಂದಿ ಸಾವು

ಬೆಂಗಳೂರು: ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಅವಘಡಗಳು ಸಂಭವಿಸಿವೆ. ಆರ್‌ಸಿಬಿ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಜನಸಾಗರದ ನಡುವೆ ನೂಕುನುಗ್ಗಲು ಏರ್ಪಟ್ಟು ಕಾಲ್ತುಳಿತಕ್ಕೆ 6 ಮಂದಿ ಸಾವನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಐವರು ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.





























































































































error: Content is protected !!
Scroll to Top