ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ​: ಇನ್ನೋರ್ವ ಆರೋಪಿ ಬಂಧನ

ಮಂಗಳೂರು : ಬಜ್ಪೆ ಬಳಿ ಮೇ 1ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ. ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.



































































































error: Content is protected !!
Scroll to Top